ರಾಮನಗರ, ಜೂನ್ 6: ರಾಮನಗರ ಜಿಲ್ಲೆಯ ಬಿಡದಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ 10ಕ್ಕೂ ಹೆಚ್ಚು ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ K. B. Chandrashekar ಪ್ರಯಾಣಿಸುತ್ತಿದ್ದ ಕಾರು ಕೂಡ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಮಾಜಿ ಶಾಸಕ ಹಾಗೂ ಅವರ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ನಡುವೆ ಏಕಾಏಕಿ ಸಂಭವಿಸಿದ ಅಪಘಾತದಿಂದ ಹತ್ತಾರು ವಾಹನಗಳು ಒಂದರ ಹಿಂದೆ ಒಂದಾಗಿ ಡಿಕ್ಕಿ ಹೊಡೆದಿವೆ. ಈ ವೇಳೆ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಕೂಡ ಸರಣಿ ಅಪಘಾತದಲ್ಲಿ ಸಿಲುಕಿದೆ.
ಅಪಘಾತದ ಪರಿಣಾಮ ಕೆಲವು ವಾಹನಗಳಿಗೆ ಗಂಭೀರ ಹಾನಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು, ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು.
ಅಪಘಾತದಲ್ಲಿ ಮಾಜಿ ಶಾಸಕ ಹಾಗೂ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು ವಿಶೇಷ ಸುದ್ದಿಗಳಿಗೆ ನಮ್ಮ ಕರುನಾಡು ಟಿವಿ ಡಿಜಿಟಲ್ ಚಾನೆಲ್ ಲಿಂಕ್ ಒತ್ತಿರಿ: