ಹಾವೇರಿ: ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.
ಮೃತರನ್ನು ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
🚨 ದಾವಣಗೆರೆ ಕಡೆ ತೆರಳುತ್ತಿದ್ದಾಗ ದುರಂತ
ಮೃತರು ಹಾಗೂ ಗಾಯಾಳುಗಳು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಸಮೀಪ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸೌಂದರ್ಯ, ಸಿಂಧು ಹಾಗೂ ಕಶ್ವಶ್ರೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
💔 ಮೂವರ ಸಾವು... ಕುಟುಂಬಸ್ಥರಲ್ಲಿ ಆಕ್ರಂದನ
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಲು ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
⚠️ NH-48ರಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ಜೀವ ಬಲಿ!
📍 ಸ್ಥಳ: ಚಳಗೇರಿ ಟೋಲ್, ರಾಣೇಬೆನ್ನೂರು ತಾಲೂಕು, ಹಾವೇರಿ ಜಿಲ್ಲೆ
📰 ಕರ್ನಾಟಕದ ಜಿಲ್ಲಾವಾರು ಸುದ್ದಿ, ಅಪಘಾತ, ಕ್ರೈಂ ಮತ್ತು ಬ್ರೇಕಿಂಗ್ ನ್ಯೂಸ್ಗಾಗಿ:
🌐 www.karunaadutimes.com
👉 ಇನ್ನಷ್ಟು ಸ್ಥಳೀಯ ಸುದ್ದಿಗಳಿಗಾಗಿ ಈಗಲೇ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ
🔗 🌐 www.karunaadutimes.com
Tags:#Haveri #Ranebennur #Chalageri #HaveriNews #RanebennurNews #NH48 #NationalHighway48 #RoadAccident #CarAccident #TruckAccident #FatalAccident #HaveriAccident #KarnatakaAccident #BreakingNews #AccidentNews #Davangere #DavangereNews #KarnatakaNews #LatestNews #LocalNews #KarunaduTimes #KapprunaduTimesNews