ರಾಯಚೂರು: ಕಲಿಯುಗದ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಈ ಬಾರಿ ಭಕ್ತರ ಕಾಣಿಕೆ ದಾಖಲೆ ಮೊತ್ತ ತಲುಪಿದೆ. ಆಗಸ್ಟ್–ಸೆಪ್ಟೆಂಬರ್ ಅವಧಿಯ 16 ದಿನಗಳ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು ₹3 ಕೋಟಿ 30 ಲಕ್ಷ 69,139 ನಗದು ಕಾಣಿಕೆ ಸಂಗ್ರಹವಾಗಿದೆ.
ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿತ್ತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ರಾಯರ ದರ್ಶನ ಪಡೆದು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.
💰 ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ವಿವರ:
▪️ ಕರೆನ್ಸಿ ನೋಟುಗಳು – ₹3,20,66,639
▪️ ನಾಣ್ಯಗಳು – ₹10,02,500
▪️ ಚಿನ್ನ – 47 ಗ್ರಾಂ
▪️ ಬೆಳ್ಳಿ – 632 ಗ್ರಾಂ
ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು. ಎಣಿಕೆ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಉಪಸ್ಥಿತರಿದ್ದರು.
🙏 ರಾಯರ ಮೇಲಿನ ಭಕ್ತರ ಅಪಾರ ನಂಬಿಕೆಗೆ ಈ ಬಾರಿ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆಯ ಪ್ರಮಾಣ ಮತ್ತೊಂದು ಸಾಕ್ಷಿಯಾಗಿದೆ. ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರದ ಪರಿಣಾಮವಾಗಿ ಕಡಿಮೆ ಅವಧಿಯಲ್ಲೇ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.
🌐 ರಾಯಚೂರು ಸೇರಿದಂತೆ ಕರ್ನಾಟಕದ ಪ್ರಮುಖ ಸುದ್ದಿ, ಧಾರ್ಮಿಕ ಕ್ಷೇತ್ರಗಳ ವಿಶೇಷ ವರದಿ ಮತ್ತು ತಾಜಾ ಅಪ್ಡೇಟ್ಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ:
👉 www.karunaadutimes.com
ವರದಿ: ನpವೀನ್ ಕುಮಾರ್