ತುಮಕೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ತೆರಳಿದ್ದ ರೈತರೊಬ್ಬರು ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೊನ್ನೇನಹಳ್ಳಿ ಗ್ರಾಮದ ರಂಗಶಾಮಣ್ಣ (60) ಎಂದು ಗುರುತಿಸಲಾಗಿದೆ.
ರಂಗಶಾಮಣ್ಣ ಅವರು ಎಂದಿನಂತೆ ತಮ್ಮ ಜಮೀನಿನತ್ತ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ನೆಲಕ್ಕೆ ಬಿದ್ದಿತ್ತು ಎನ್ನಲಾಗಿದೆ. ಇದನ್ನು ಗಮನಿಸದೆ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯುತ್ ತಂತಿಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ತಕ್ಷಣ ಪರಿಶೀಲಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ನವೀನ್ ಕುಮಾರ್
🌐 ಇಂತಹ ಸ್ಥಳೀಯ ಹಾಗೂ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ:
👉 www.karunaadutimes.com
Tags:#Tumakuru #Sira #Shira #Gowdagere #Honnehalli #TumakuruNews #SiraNews #FarmerDeath #Electrocution #ElectricShock #Bescom #ಕರ್ನಾಟಕಸುದ್ದಿ #ತುಮಕೂರು #ಶಿರಾ #ಗೌಡಗೆರೆ #ಹೊನ್ನೇನಹಳ್ಳಿ #ರೈತಸಾವು #ವಿದ್ಯುತ್_ಅಪಘಾತ #ಕರುನಾಡುಟೈಮ್ಸ್