ಹಾವೇರಿ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಚನ್ನೂರು ಗ್ರಾಮದ ನಿವಾಸಿ ಎಸ್.ಎಸ್. ಮಠದ್ ಎಂದು ಗುರುತಿಸಲಾಗಿದೆ.
ಘಟನೆ ವೇಳೆ ಸಾರಿಗೆ ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಬಸ್ ಮತ್ತು ಲಾರಿ ಡಿಕ್ಕಿಯ ರಭಸಕ್ಕೆ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ನೆಗಳೂರು ಕಡೆಗೆ ತೆರಳುತ್ತಿದ್ದ ಬಸ್
ಹಾವೇರಿಯಿಂದ ನೆಗಳೂರು ಗ್ರಾಮದತ್ತ ಸಾರಿಗೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕ್ಯಾಬೇಜ್ ಸಾಗಿಸಲು ಬಂದಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಪೊಲೀಸರ ಭೇಟಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗುತ್ತಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯಿತು.
ಘಟನೆ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.
🚨 ಅಪಘಾತದ ಸುದ್ದಿ ಕ್ಷಣಕ್ಷಣದ ಅಪ್ಡೇಟ್ಗಾಗಿ ಕರುನಾಡು ಟೈಮ್ಸ್ ಜೊತೆಗಿರಿ.
🌐 ಇನ್ನಷ್ಟು ಸ್ಥಳೀಯ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ವೆಬ್ಸೈಟ್ಗೆ ಭೇಟಿ ನೀಡಿ:
👉 www.karunaadutimes.com
ವರದಿ: ನವೀನ್ ಕುಮಾರ್