ರಾಮನಗರ: ಗ್ರಾಹಕರನ್ನು ಡ್ರಾಪ್ ಮಾಡಿದ ಬಳಿಕ ಕಾರಿನಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಸಮೀಪ ನಡೆದಿದೆ.
ಮೃತರನ್ನು ಬೆಂಗಳೂರಿನ ಕೆ.ಪಿ. ಅಗ್ರಹಾರ ಮೂಲದ ಪುಷ್ಪರಾಜ್ (29) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಪುಷ್ಪರಾಜ್ ಕ್ಯಾಬ್ನಲ್ಲಿ ಗ್ರಾಹಕರನ್ನು ತಾವರೆಕೆರೆ ವ್ಯಾಪ್ತಿಯಲ್ಲಿ ಡ್ರಾಪ್ ಮಾಡಿದ ಬಳಿಕ ಚಂದ್ರಪ್ಪ ಸರ್ಕಲ್ ಸಮೀಪದ ಲೇಔಟ್ವೊಂದರಲ್ಲಿ ಕಾರನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದರು ಎನ್ನಲಾಗಿದೆ.
ಆದರೆ ಬೆಳಗ್ಗೆ ಕಳೆದರೂ ಕಾರು ಅದೇ ಸ್ಥಳದಲ್ಲಿ ನಿಂತಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಮೂಡಿದೆ. ಬಳಿಕ ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಚಾಲಕ ಕಾರಿನೊಳಗೇ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. 😔
ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸ್ಪಷ್ಟವಾಗಲಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
👉 ಕಾರಿನಲ್ಲೇ ಚಾಲಕನ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
🌐 ಇನ್ನಷ್ಟು ಸ್ಥಳೀಯ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ಭೇಟಿ ನೀಡಿ:
🔗 www.karunaadutimes.com
📢 ಕರುನಾಡಿನ ಸುದ್ದಿಗಳು ನಿಮ್ಮ ಬೆರಳ ತುದಿಯಲ್ಲಿ — ಕರುನಾಡು ಟೈಮ್ಸ್ ಜೊತೆ ಸಂಪರ್ಕದಲ್ಲಿರಿ.
ವರದಿ: ನವೀನ್ ಕುಮಾರ್
Hashtags:#ರಾಮನಗರ #ತಾವರೆಕೆರೆ #ಚಂದ್ರಪ್ಪಸರ್ಕಲ್ #ಕ್ಯಾಬ್_ಚಾಲಕ #ಪುಷ್ಪರಾಜ್ #ಅನುಮಾನಾಸ್ಪದ_ಸಾವು #ಹೃದಯಾಘಾತ #ಬೆಂಗಳೂರುಸುದ್ದಿ #ಕರ್ನಾಟಕಸುದ್ದಿ #KannadaNews #KarnatakaNews #KarunaaduTimes