ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮತ್ತೆ ಚುರುಕುಗೊಂಡಿದ್ದು, ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ನ್ಯಾಯಾಲಯವು ಇಬ್ಬರು ನಟರು ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗಿ ಸಾಕ್ಷ್ಯ ನೀಡುವಂತೆ ಸೂಚಿಸಿದೆ.
ನ್ಯಾಯಾಲಯದ ದಾಖಲೆಗಳ ಪ್ರಕಾರ, ನಟ ಚಿಕ್ಕಣ್ಣ ಅವರಿಗೆ CW-80 ಹಾಗೂ ನಟ ಯಶಸ್ ಸೂರ್ಯ ಅವರಿಗೆ CW-98 ಎಂದು ಸಮನ್ಸ್ ಜಾರಿಯಾಗಿದೆ.
ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಸಾಕ್ಷ್ಯಕ್ಕೆ ಕರೆ 📌
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್ ಭಾಗವಹಿಸಿದ್ದರೆಂದು ಹೇಳಲಾಗಿರುವ ಬೆಂಗಳೂರಿನ ಸ್ಟೋನಿ ಬ್ರೂಕ್ನಲ್ಲಿನ ಪಾರ್ಟಿಯಲ್ಲಿ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದರು ಎಂಬುದು ಪ್ರಕರಣದ ತನಿಖೆಯ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಗಮನಕ್ಕೆ ಬಂದಿರುವ ವಿಚಾರಗಳನ್ನು ನ್ಯಾಯಾಲಯದ ಮುಂದೆ ವಿವರಿಸಲು ಇಬ್ಬರು ನಟರನ್ನು ಸಾಕ್ಷಿಗಳಾಗಿ ವಿಚಾರಣೆಗೆ ಕರೆಯಲಾಗಿದೆ.
ಇದೀಗ ಅಕ್ಟೋಬರ್ 13ರಂದು ನಡೆಯಲಿರುವ ವಿಚಾರಣೆಯಲ್ಲಿ ಇಬ್ಬರು ನಟರು ನ್ಯಾಯಾಲಯಕ್ಕೆ ಹಾಜರಾಗಿ ಏನೆಲ್ಲಾ ಮಾಹಿತಿ ನೀಡಲಿದ್ದಾರೆ ಎಂಬುದು ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆದುಕೊಂಡಿದೆ. ⚖️
ಸೂಚನೆ: ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದ್ದು, ಆರೋಪಗಳಿಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ನ್ಯಾಯಾಲಯವೇ ನೀಡಬೇಕಾಗಿದೆ.
📰 ಇನ್ನಷ್ಟು ಕರ್ನಾಟಕದ ಬ್ರೇಕಿಂಗ್, ಕ್ರೈಂ, ಸಿನಿಮಾ ಹಾಗೂ ಪ್ರಮುಖ ಸುದ್ದಿಗಳಿಗಾಗಿ:
🌐 www.karunaadutimes.com
👉 ವೆಬ್ಸೈಟ್ಗೆ ಭೇಟಿ ನೀಡಿ | Website Visit 🔗
ವರದಿ: ನವೀನ್ ಕುಮಾರ್