ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ (Kurlon) ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಹಾಸಿಗೆ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಶೆಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊಗೆ ವೇಗವಾಗಿ ಹರಡಿದ್ದು, ದೂರದವರೆಗೂ ಗೋಚರಿಸಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸದ್ಯ ಲಭ್ಯವಾದ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಗ್ನಿ ಅವಘಡದ ಸಂಪೂರ್ಣ ವಿವರ ಹಾಗೂ ಸಂಭವಿಸಿರುವ ಆಸ್ತಿಪಾಸ್ತಿ ನಷ್ಟದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
✍️ ವರದಿ: ನವೀನ್ ಕುಮಾರ್
🌐 ಇನ್ನಷ್ಟು ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ:
👉 www.karunaadutimes.com
📲 ಸುದ್ದಿಯನ್ನು ಶೇರ್ ಮಾಡಿ; ಸ್ಥಳೀಯ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ಕರುನಾಡು ಟೈಮ್ಸ್ ಜೊತೆಗಿರಿ.
Tags:#Bengaluru #Peenya #FireAccident #Kurlon #BreakingNews #KannadaNews #KarunaaduTimes