ಹಾಸನ, ಜುಲೈ 4: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಳಲಿ ಬೈಪಾಸ್ ಸಮೀಪದ ಹೇಮಾವತಿ ನದಿಯಲ್ಲಿ ನಡೆದ ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಒಬ್ಬ ವ್ಯಕ್ತಿಯ ಜೀವವನ್ನು ಸುರಕ್ಷಿತವಾಗಿ ಉಳಿಸಿದ್ದಾರೆ.
ಹಾಸನ ಮೂಲದ 38 ವರ್ಷದ ಚಿರಂತ್ ಅವರು ರಾಷ್ಟ್ರೀಯ ಹೆದ್ದಾರಿ–75ರ ಮಳಲಿ ಬೈಪಾಸ್ ಬಳಿ ಇರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿರುವುದಾಗಿ ತಿಳಿದುಬಂದಿದೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸ್ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಕ್ಷಿಪ್ರವಾಗಿ ಸ್ಥಳಕ್ಕೆ ಧಾವಿಸಿದ್ದಾರೆ.
ನದಿಯಲ್ಲಿ ಆ ಸಂದರ್ಭದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಅವರು ಮರಳಿನ ಮೇಲೆ ಬಿದ್ದಿದ್ದರು. ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ. ಬಳಿಕ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸ್ಥಳೀಯರ ಸಮಯೋಚಿತ ಮಾಹಿತಿ ಹಾಗೂ ಅಗ್ನಿಶಾಮಕ ದಳ–ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಮತ್ತೊಂದು ಜೀವ ಉಳಿದಿರುವುದು ಗಮನಾರ್ಹವಾಗಿದೆ.
Tags#Hassan #Sakleshpur #HemavathiRiver #HemavathiBridge #HassanNews #SakleshpurNews #BreakingNews #KarnatakaNews #FireAndRescue #Police #KarunaaduTimes #KannadaNews #LatestNews #RescueOperation #HassanUpdates