ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ಸಂಜೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಕೆಲವು ದಿನಗಳಿಂದ ಐಸಿಯುನಲ್ಲಿ ವೈದ್ಯಕೀಯ ನಿಗಾದಲ್ಲಿದ್ದ ಅವರು, ಇಂದು ಸಂಜೆ ಸುಮಾರು 4.30 ಗಂಟೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಚೆನ್ನಮ್ಮ ಅವರು ಹಲವು ದಶಕಗಳ ಕಾಲ ಹೆಚ್.ಡಿ. ದೇವೇಗೌಡ ಅವರ ರಾಜಕೀಯ ಮತ್ತು ಸಾರ್ವಜನಿಕ ಬದುಕಿನ ಹಿನ್ನಲೆಯಲ್ಲಿ ದೃಢವಾದ ಕುಟುಂಬದ ಬೆಂಬಲವಾಗಿ ಗುರುತಿಸಿಕೊಂಡಿದ್ದರು. ಸಾರ್ವಜನಿಕ ಜೀವನದಿಂದ ದೂರವಿದ್ದರೂ, ದೇವೇಗೌಡ ಕುಟುಂಬದ ಏಕತೆ ಮತ್ತು ಮೌಲ್ಯಗಳನ್ನು ಕಾಪಾಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ದೇವೇಗೌಡ ಕುಟುಂಬಕ್ಕೆ ಸಾಂತ್ವನ ಹೇಳಲು ರಾಜಕೀಯ ನಾಯಕರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಆಗಮಿಸುತ್ತಿದ್ದಾರೆ.
ಚೆನ್ನಮ್ಮ ಅವರ ಅಗಲಿಕೆಯಿಂದ ದೇವೇಗೌಡ ಕುಟುಂಬಕ್ಕೆ ಮಾತ್ರವಲ್ಲ, ಕರ್ನಾಟಕದ ರಾಜಕೀಯ ವಲಯಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.
ಕರುನಾಡು ಟೈಮ್ಸ್ ವತಿಯಿಂದ ದಿವಂಗತ ಚೆನ್ನಮ್ಮ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.