: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಮೂಡಿದೆ.
ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಈ ನೇಮಕಾತಿಗೆ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿಯೊಂದಿಗೆ ಹಲವು ಮಹತ್ವದ ತೀರ್ಮಾನಗಳು
ಸಂಪುಟ ಸಭೆಯಲ್ಲಿ ಶಿಕ್ಷಣ ಕ್ಷೇತ್ರದ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ.
ಮುಖ್ಯವಾಗಿ:
✅ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ
✅ ವಿದ್ಯಾರ್ಥಿ ನಿಲಯಗಳ (Hostel) ಬೆಡ್ಕಾಟ್ ಖರೀದಿಗೆ ₹30 ಕೋಟಿ
✅ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ₹10 ಲಕ್ಷ ಸಹಾಯಧನ
✅ ರಾಯಚೂರಿನಲ್ಲಿ ₹11 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಕೇಂದ್ರ
✅ ಬೆಂಗಳೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಅನುಮೋದನೆ
✅ ಕಲಬುರಗಿ ಭಾಗದಲ್ಲಿ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಅನುಮತಿ
✅ ಲೋಕಭವನ ನಿರ್ಮಾಣಕ್ಕೆ ₹27 ಕೋಟಿ
✅ ಮೈಸೂರು ಜಿಲ್ಲೆಯ ನಂಜನಗೂಡಿನ ಕಪಿಲಾ ನದಿ ಅಭಿವೃದ್ಧಿಗೆ ₹70 ಕೋಟಿ
✅ ಹಿರಿಯೂರು ತಾಲೂಕಿನ 116 ಕೆರೆಗಳ ಅಭಿವೃದ್ಧಿಗೆ ₹244 ಕೋಟಿ ಆಡಳಿತಾತ್ಮಕ ಅನುಮೋದನೆ
✅ ಕೆಪಿಎಸ್ಸಿ ಅಧ್ಯಕ್ಷರ ಅಮಾನತು ಪ್ರಸ್ತಾವಕ್ಕೂ ಸಚಿವ ಸಂಪುಟ ಒಪ್ಪಿಗೆ
ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ
15 ಸಾವಿರ ಶಿಕ್ಷಕರ ನೇಮಕಾತಿ ಘೋಷಣೆ ರಾಜ್ಯದ ಬಿಇಡಿ, ಡಿಇಡಿ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಉತ್ತೀರ್ಣ ಅಭ್ಯರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ನೇಮಕಾತಿ ಅಧಿಸೂಚನೆ, ಅರ್ಹತೆ, ಹುದ್ದೆಗಳ ಹಂಚಿಕೆ ಹಾಗೂ ಅರ್ಜಿ ಪ್ರಕ್ರಿಯೆಯ ಕುರಿತು ಶಿಕ್ಷಣ ಇಲಾಖೆ ಶೀಘ್ರದಲ್ಲೇ ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆಯಿದೆ.
Tags:#TeachersRecruitment #KarnatakaJobs #GovernmentJobs #TeacherVacancy #EducationNews #DKShivakumar #Karnataka #JobAlert #BreakingNews #KannadaNews #KPSC #KarunaaduTimes
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update