ಮೈಸೂರು: ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಪ್ರಕರಣದಲ್ಲಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಮೃತರನ್ನು ಹರೀಶ್ (49), ಪತ್ನಿ ನಿಶ್ಚಿತ (36), ಪುತ್ರಿಯರಾದ ನೆಕ್ಸಾ (13) ಮತ್ತು ರಕ್ಷಾ (6) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹರೀಶ್ ಮೊದಲು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದು, ಬಳಿಕ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯೊಳಗೆ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ಮೇಲಿನ ಮಹಡಿಯ ಕೋಣೆಯಲ್ಲಿ ತಾನು ನೇಣು ಬಿಗಿದುಕೊಳ್ಳುತ್ತಿರುವುದಾಗಿ ಉಲ್ಲೇಖಿಸಿರುವ ಜೊತೆಗೆ ಸಾಲದ ಒತ್ತಡ, ಆಸ್ತಿ ಸಂಬಂಧಿತ ಕೆಲವು ಮಾಹಿತಿಗಳನ್ನು ದಾಖಲಿಸಿರುವುದು ಬೆಳಕಿಗೆ ಬಂದಿದೆ. ಅಗತ್ಯ ದಾಖಲೆಗಳು ಲಾಕರ್ನಲ್ಲಿ ಇರುವುದಾಗಿಯೂ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ದುರ್ಘಟನೆಗೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Tags:#Mysuru #Hunsur #BreakingNews #CrimeNews #FamilyTragedy #KarnatakaNews #MysuruNews #PoliceInvestigation #KannadaNews #LatestNews #KarunaaduTimes #ViralNews #CrimeReport #HunsurNews #KarnatakaBreaking #PublicNews #ಟುಡೇನ್ಯೂಸ್
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update