ಬೆಳಗಾವಿ: ಇನ್ಶೂರೆನ್ಸ್ ಹಣ ಪಡೆಯುವ ಉದ್ದೇಶದಿಂದ ತನ್ನದೇ ಚಿನ್ನದಂಗಡಿಯಲ್ಲಿ ಕಳ್ಳತನ ನಡೆದಂತೆ ನಾಟಕವಾಡಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಖಡೇಬಜಾರ್ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತನನ್ನು ವಿ.ಪಿ. ವೇರ್ಣೇಕರ್ ಆಂಡ್ ಸನ್ಸ್ ಚಿನ್ನದಂಗಡಿಯ ಮಾಲೀಕ ಕೃಷ್ಣಾನಂದ ವೇರ್ಣೇಕರ್ ಎಂದು ಗುರುತಿಸಲಾಗಿದೆ.
ಆರೋಪಿ ತನ್ನ ಅಂಗಡಿಯಿಂದ ಸುಮಾರು ₹65.95 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳ ಪರಿಶೀಲನೆ, ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿದಾಗ, ದೂರುದಾರನೇ ಪ್ರಕರಣದ ಪ್ರಮುಖ ಆರೋಪಿಯಾಗಿರುವುದು ಬಹಿರಂಗವಾಗಿದೆ.
ತನಿಖೆಯಲ್ಲಿ, ಚಿನ್ನಾಭರಣ ಮತ್ತು ಹಣವನ್ನು ಆರೋಪಿ ತನ್ನದೇ ಸ್ಕೂಟಿಯ ಡಿಕ್ಕಿಯಲ್ಲಿ ಬಚ್ಚಿಟ್ಟಿದ್ದ ಎಂಬ ಮಾಹಿತಿ ದೊರೆತಿದೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, 519.8 ಗ್ರಾಂ ಚಿನ್ನಾಭರಣ, 31 ಗ್ರಾಂ ಬೆಳ್ಳಿ ಆಭರಣ, ₹2.83 ಲಕ್ಷ ನಗದು ಹಾಗೂ ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು ₹65.95 ಲಕ್ಷ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಇನ್ಶೂರೆನ್ಸ್ ಹಣ ಪಡೆಯುವ ಉದ್ದೇಶದಿಂದ ಕಳ್ಳತನದ ಕಥೆ ಸೃಷ್ಟಿಸಲಾಗಿತ್ತೇ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
Tags:#Belagavi #GoldShop #InsuranceFraud #CrimeNews #BelagaviPolice #GoldTheft #BreakingNews #KarnatakaNews #KannadaNews #LatestNews #CrimeReport #PoliceInvestigation #GoldJewellery #TrendingNews #ViralNews #KarunaaduTimes #BelagaviBreaking #FraudCase #IndiaNews #ನ್ಯೂಸುಪ್ಡೇಟ್
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update