ಬೆಂಗಳೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗ ಸಂಸ್ಥೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ವತಿಯಿಂದ 183ನೇ ಪತ್ರಿಕಾ ದಿನಾಚರಣೆವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಮೌಲ್ಯಗಳು, ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಹಾಗೂ ಡಿಜಿಟಲ್ ಯುಗದಲ್ಲಿ ಜವಾಬ್ದಾರಿಯುತ ಪತ್ರಿಕೋದ್ಯಮದ ಅಗತ್ಯತೆ ಕುರಿತು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. �
ಕಾರ್ಯಕ್ರಮವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಶ್ರೀ ಆಯುಷ್ಯಕಾನಂ ಉದ್ಘಾಟಿಸಿದರು. ವಿಶೇಷ ಆಹ್ವಾನಿತರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಶ್ರೀ ಮಾನಸ, ಹಾಸನ ವಾಣಿ ಸಂಪಾದಕರಾದ ಶ್ರೀಮತಿ ಲೀಲಾವತಮ್ಮ, ದೂರದರ್ಶನದ ನಿರ್ದೇಶಕರಾದ ಶ್ರೀಮತಿ ನಿರ್ಮಲ ಏಲೆಗಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಜ್ಯಾಧ್ಯಕ್ಷೆ ಶ್ರೀಮತಿ ಶಾಂತಕುಮಾರಿ ಹಾಗೂ ರಾಜ್ಯ ಕಾರ್ಯದರ್ಶಿ ಶ್ರೀ ರಾಜೇಂದ್ರ ಪ್ರಸಾದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಹಿರಿಯ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.
ಅದೇ ವೇದಿಕೆಯಲ್ಲಿ ಮಂಡ್ಯ ಜಿಲ್ಲಾ ಜರ್ನಲಿಸ್ಟ್ ಕ್ಲಬ್ ಅಧ್ಯಕ್ಷ ಶ್ರೀ ಎ.ಎಲ್. ಬಸವೇಗೌಡ ಅವರ ಪತ್ರಿಕೋದ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲಾಯಿತು. ಈ ಗೌರವ ಮಂಡ್ಯ ಜಿಲ್ಲೆಯ ಪತ್ರಕರ್ತರ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗಿದ್ದು, ಜಿಲ್ಲೆಯ ಮಾಧ್ಯಮ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.
ಕಾರ್ಯಕ್ರಮವು ಪತ್ರಕರ್ತರ ವೃತ್ತಿಪರ ಬದ್ಧತೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಮಾಧ್ಯಮಗಳ ಮಹತ್ವವನ್ನು ಮತ್ತೊಮ್ಮೆ ನೆನಪಿಸುವ ವೇದಿಕೆಯಾಯಿತು.
Tags:#PressDay2026 #183ನೇಪತ್ರಿಕಾದಿನಾಚರಣೆ #Journalism #KarnatakaJournalists #Mandya #ALBasavegowda #JournalistHonour #Bengaluru #RavindraKalakshetra #MediaAcademy #KannadaNews #KarunaaduTimes #MandyaNews #PressClub #WorkingJournalists
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update