ಬೆಂಗಳೂರು, ಜುಲೈ 23: ಬಿಜೆಪಿ ಶಾಸಕರು ಹಾಗೂ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಘಟನೆ ಪೂರ್ವನಿಯೋಜಿತವಾಗಿತ್ತೇ ಎಂಬ ಅಂಶದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಆರೋಪಿ ಮೊಟ್ಟೆಗಳನ್ನು ಒಂದು ಬಾಕ್ಸ್ನಲ್ಲಿ ತಂದು ಘಟನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರ ಕೈವಾಡವಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಯ ಹಿಂದೆ ಯಾವುದೇ ಸಂಘಟಿತ ಸಂಚಿ ಇದೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ವಿಚಾರಣೆ ವೇಳೆ, ಮೊಟ್ಟೆಗಳನ್ನು ಎಲ್ಲಿಂದ ಖರೀದಿಸಲಾಯಿತು, ಯಾರ ಸೂಚನೆಯ ಮೇರೆಗೆ ಈ ಕೃತ್ಯ ನಡೆಯಿತು, ಘಟನೆಯ ಮುನ್ನ ಯಾವುದೇ ಯೋಜನೆ ರೂಪಿಸಲಾಗಿತ್ತೇ ಹಾಗೂ ಆರೋಪಿ ಜೊತೆ ಇದ್ದವರ ಪಾತ್ರವೇನು ಎಂಬ ಹಲವು ಪ್ರಮುಖ ಅಂಶಗಳ ಕುರಿತು ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ಪೊಲೀಸ್ ವಶಕ್ಕೆ ಪಡೆಯುವ ಕುರಿತು ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.
Tags: #BJP #BJPMLA #Bengaluru #Shivajinagar #EggAttack #Punyesh #KarnatakaNews #BreakingNews #PoliticalNews #PoliceInvestigation #KannadaNews #BengaluruNews #LatestNews #KarunaaduTimes #Politics #CrimeNews #ViralNews #IndiaNews
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update