ಶಿವಮೊಗ್ಗ: ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಶಿವಮೊಗ್ಗದಲ್ಲೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ, ಕೆಲ ಕಾರ್ಯಕರ್ತರು ಬಿಜೆಪಿ ಕಚೇರಿಯತ್ತ ತೆರಳಿ ಪ್ರತಿಭಟನೆ ನಡೆಸಿದ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ನಗರದ ಮಹಾವೀರ ಸರ್ಕಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ಬಳಿಕ ಏಕಾಏಕಿ ಬಿಜೆಪಿ ಕಚೇರಿಯತ್ತ ಧಾವಿಸಿದರು. ಮಾರ್ಗಮಧ್ಯೆ ಹಾಕಲಾಗಿದ್ದ ಪೊಲೀಸ್ ಬ್ಯಾರಿಕೇಡ್ಗಳನ್ನು ದಾಟಿ ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು.
ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಕೆಲ ದ್ವಿಚಕ್ರ ವಾಹನಗಳು ನೆಲಕ್ಕುರುಳಿದ ಘಟನೆ ವರದಿಯಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸಪಟ್ಟಿದ್ದು, ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದರು.
ಇದೇ ವೇಳೆ, ಕೆಲ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ಹತ್ತಿ ಪಕ್ಷದ ಧ್ವಜ ಪ್ರದರ್ಶಿಸಿದ ಘಟನೆಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಮತ್ತು ಡಿವೈಎಸ್ಪಿ ಶೀಲವಂತ್ ಅವರ ನಡುವೆ ಮಾತಿನ ಚಕಮಕಿ ನಡೆದಿರುವುದಾಗಿ ತಿಳಿದುಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Tags:#Shivamogga, #CongressProtest, #BJPOffice, #NEET, #NEETProtest, #NEETPaperLeak, #ShimogaNews, #KarnatakaPolitics, #Congress, #BJP, #DharmendraPradhan, #Police, #BreakingNews, #KannadaNews, #KarnatakaNews, #KarunaaduTimes, #ಶಿವಮೊಗ್ಗ, #ಕಾಂಗ್ರೆಸ್, #ಬಿಜೆಪಿ, #ನೀಟ್, #ಪ್ರತಿಭಟನೆ, #ಕರ್ನಾಟಕರಾಜಕೀಯ, #ಬ್ರೇಕಿಂಗ್ನ್ಯೂಸ್, #ಇಂದಿನಸುದ್ದಿ
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update