ನಾಗಮಂಗಲ, ಜುಲೈ 24: ಸಾಮಾಜಿಕ ಕಾಳಜಿ ಮತ್ತು ಜನಜೀವನಕ್ಕೆ ಸಂಬಂಧಿಸಿದ ಕಥಾಹಂದರ ಹೊಂದಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಕನ್ನಡ ಚಲನಚಿತ್ರದ ಪ್ರೀಮಿಯರ್ ಶೋ ಶುಕ್ರವಾರ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಚಿತ್ರದ ಬಿಡುಗಡೆ ಅಂಗವಾಗಿ ಆಯೋಜಿಸಿರುವ ಉದ್ಘಾಟನಾ ಮೆರವಣಿಗೆಯಲ್ಲಿ ಚಿತ್ರದ ನಾಯಕ ಕುಮಾರ್ ಬಂಗಾರಪ್ಪ, ನಟಿ ರಾಗಿಣಿ, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಚಿತ್ರತಂಡದ ಕಲಾವಿದರು ಭಾಗವಹಿಸಲಿದ್ದಾರೆ. ವಿಶೇಷ ಆಕರ್ಷಣೆಯಾಗಿ ಚಿತ್ರದಲ್ಲಿ ಮುಖ್ಯಮಂತ್ರಿ ಪಾತ್ರ ನಿರ್ವಹಿಸಿರುವ ಮಾಜಿ ಸಂಸದ ಶಿವರಾಮೇಗೌಡ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಅವರು, ನಾಗಮಂಗಲದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿತ್ರವನ್ನು ವೀಕ್ಷಿಸಿ ಕನ್ನಡ ಚಿತ್ರರಂಗವನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ.
ಸಾಮಾಜಿಕ ಸಂದೇಶವನ್ನು ಒಳಗೊಂಡಿರುವ ಈ ಚಿತ್ರವು ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮೂಡಿಸಿದ್ದು, ಪ್ರೀಮಿಯರ್ ಶೋಗೆ ಚಿತ್ರಾಭಿಮಾನಿಗಳಿಂದ ಉತ್ತಮ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ.
Tags:#ನಾಗಮಂಗಲ #Nagamangala #ಸರ್ಕಾರಿನ್ಯಾಯಬೆಲೆಅಂಗಡಿ #KannadaMovie #KannadaCinema #KumarBangarappa #Ragini #Dodanna #ShivarameGowda #MoviePremiere #MandyaNews #CinemaNews #KannadaFilm #KarunaaduTimes #TrendingNews #ViralNews #KannadaNews #ಕರ್ನಾಟಕ #ಮಂಡ್ಯ #ಚಿತ್ರರಂಗ
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update