ಬೆಂಗಳೂರು: ನಗರದ ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಬೆಂಕಿಗೆ ಆಹುತಿಯಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಒಂದು ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಜ್ವಾಲೆಗಳು ಪಕ್ಕದಲ್ಲಿದ್ದ ಇತರೆ ಬಸ್ಗಳಿಗೂ ವ್ಯಾಪಿಸಿ, ಒಟ್ಟು ನಾಲ್ಕು ಬಸ್ಗಳು ಧಗಧಗನೆ ಹೊತ್ತಿ ಉರಿದಿವೆ. ಪರಿಣಾಮ, ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಬಸ್ಗಳ ಮಾಲೀಕರ ವಿವರ ಹಾಗೂ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿ ಅವಘಡದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Tags:#Anekal #Bengaluru #BusFire #PrivateBus #FireAccident #Chandapura #OldChandapura #KarnatakaNews #BreakingNews #FireDepartment #SuryanagarPolice #AccidentNews #KarunaaduTimes #KannadaNews #ViralNews #BengaluruNews #AnekalNews #BusAccident #LatestNews #Karnataka
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update