ಶಿವಮೊಗ್ಗ: ಮಲೆನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮ ದೇಶದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸಾಗರ ತಾಲೂಕಿನ ಜೋಗ ಜಲಪಾತ ತನ್ನ ಸಹಜ ವೈಭವವನ್ನು ಮರಳಿ ಪಡೆದು ಭೋರ್ಗರೆಯುತ್ತಿದೆ.
ಭಾನುವಾರದ ರಜೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಪ್ರವಾಸಿಗರು ಜೋಗ ಜಲಪಾತಕ್ಕೆ ಭೇಟಿ ನೀಡಿ ಪ್ರಕೃತಿಯ ಅದ್ಭುತ ಸೌಂದರ್ಯವನ್ನು ಕಣ್ತುಂಬಿಕೊಂಡರು. ಶನಿವಾರವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ವಾರಾಂತ್ಯದಲ್ಲಿ ಜೋಗ ಪ್ರವಾಸಿ ತಾಣ ಜನಸಂದಣಿಯಿಂದ ಕಂಗೊಳಿಸಿತು.
ಮಳೆ ಹನಿಗಳು, ಮಂಜಿನ ಹೊದಿಕೆ ಮತ್ತು ಭೋರ್ಗರೆಯುವ ಜಲಪಾತದ ಸಮ್ಮಿಲನ ಪ್ರವಾಸಿಗರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಜೋಗದ ನಾಲ್ಕು ಪ್ರಮುಖ ಜಲಧಾರೆಗಳಾದ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಹಾಲಿನ ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರಕೃತಿ ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ.
ಜಲಪಾತದ ಸೌಂದರ್ಯವನ್ನು ತಮ್ಮ ಕ್ಯಾಮೆರಾ ಮತ್ತು ಮೊಬೈಲ್ಗಳಲ್ಲಿ ಸೆರೆಹಿಡಿಯುವ ದೃಶ್ಯಗಳು ಎಲ್ಲೆಡೆ ಕಂಡುಬಂದವು. ಉತ್ತಮ ಮಳೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಜೋಗ ಜಲಪಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.
Tags:#JogFalls #JogJalapata #Shivamogga #Sagara #Sharavathi #KarnatakaTourism #Monsoon #Nature #TravelKarnataka #WeekendTrip #RainySeason #Waterfall #Malenadu #KarnatakaNews #KannadaNews #BreakingNews #Tourism #KarunaaduTimes #ViralNews #ಟ್ರಾವೆಲಿಂದೀಯಾ
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update