ಟಿ.ನರಸೀಪುರ: ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಸಂಘಟನ್ ಸೃಜನ್’ ಅಭಿಯಾನದ ಅಂಗವಾಗಿ ತಿ.ನರಸೀಪುರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮೀಣ ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತು.
ಪಟ್ಟಣದ ಮೈಸೂರು–ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಪಿಸಿಸಿ) ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ವೀಕ್ಷಕರಾದ ರಾಜೇಶ್ ಠಾಕೂರ್ ಭಾಗವಹಿಸಿ ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ದೇಶಾದ್ಯಂತ ಸಂಘಟನೆ ಪುನರ್ರಚನೆ ನಡೆಯುತ್ತಿದ್ದು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳ ಆಯ್ಕೆಯಲ್ಲಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಸಂಘಟನೆಯಲ್ಲಿ ಸಮಾನವಾಗಿ ಒಳಗೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಗುರಿಯೊಂದಿಗೆ ಈ ಅಭಿಯಾನ ರೂಪಿಸಲಾಗಿದೆ. ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಸಮರ್ಥ, ಕ್ರಿಯಾಶೀಲ ಹಾಗೂ ಜನಪರ ನಾಯಕರನ್ನು ಗುರುತಿಸಿ ಸಂಘಟನೆಯ ಜವಾಬ್ದಾರಿಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.
ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯ್ ಕುಮಾರ್ ಮಾತನಾಡಿ, ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಕ್ತ ಪ್ರತಿನಿಧಿತ್ವ ನೀಡುವ ನಿಟ್ಟಿನಲ್ಲಿ ಸಂಘಟನ್ ಸೃಜನ್ ಅಭಿಯಾನ ಮಹತ್ವದ ಹೆಜ್ಜೆಯಾಗಿದೆ. ಜಿಲ್ಲಾ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಸಮರ್ಥ ವ್ಯಕ್ತಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ತಮ್ಮ ವೈಯಕ್ತಿಕ ಹಾಗೂ ಗುಂಪು ಅಭಿಪ್ರಾಯಗಳನ್ನು ಜಿಲ್ಲಾ ವೀಕ್ಷಕರ ಮುಂದೆ ಮಂಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಮುದ್ದುಹನುಮೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ಬಸವರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಾರ್ವತಮ್ಮ, ಹಿರಿಯೂರು ವೀರಭದ್ರ (ನವೀನ್) ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Tags#ತಿನರಸೀಪುರ #TNarasipura #Mysuru #MysuruNews #Congress #KarnatakaCongress #CongressOrganisation #SanghatanSrujan #RajeshThakur #RahulGandhi #MallikarjunKharge #BJVijayKumar #CongressWorkers #PoliticalNews #KarnatakaPolitics #KannadaNews #BreakingNews #KarunaaduTimes #MysuruRural #CongressMeeting #TodayNews #Karnataka #LocalNews #CongressUpdates #www.karunaadutimes.com
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update