ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ನಿಟ್ಟಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಇನ್ನು ಮುಂದೆ ಕೇವಲ ದಂಡ ವಿಧಿಸುವುದಲ್ಲ, ಅಗತ್ಯವಿದ್ದರೆ ಪೊಲೀಸ್ ಪ್ರಕರಣ ದಾಖಲಿಸುವ ಕ್ರಮವೂ ಕೈಗೊಳ್ಳಲಾಗುತ್ತಿದೆ.
ನಗರದ ವಿವಿಧ ಭಾಗಗಳಲ್ಲಿ ಕಸದ ಬ್ಲಾಕ್ ಸ್ಪಾಟ್ಗಳನ್ನು ತೆರವುಗೊಳಿಸಿ, ಆ ಸ್ಥಳಗಳನ್ನು ಸೌಂದರ್ಯೀಕರಣ ಮಾಡಲಾಗುತ್ತಿದೆ. ಆದರೆ ಸ್ವಚ್ಛಗೊಳಿಸಿದ ಪ್ರದೇಶಗಳಲ್ಲಿ ಮತ್ತೆ ಕಸ ಎಸೆಯುವವರ ವಿರುದ್ಧ ಈಗಿನಿಂದಲೇ ಕಾನೂನು ಕ್ರಮ ಜಾರಿಯಾಗಿದೆ.
ಈ ಕ್ರಮದ ಭಾಗವಾಗಿ, ಉತ್ತರ ವಲಯದ ಸರ್ವಜ್ಞನಗರ ವಾರ್ಡ್–26 ವ್ಯಾಪ್ತಿಯ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಸ್ವಚ್ಛಗೊಳಿಸಿದ ಪ್ರದೇಶದಲ್ಲಿ ರಾತ್ರಿ ವೇಳೆ ನಾಲ್ವರು ಕಸ ಎಸೆಯುತ್ತಿರುವುದನ್ನು ಮಾರ್ಷಲ್ಗಳು ಪತ್ತೆಹಚ್ಚಿದ್ದಾರೆ. ದಂಡ ಪಾವತಿಸಲು ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನಗರದಲ್ಲಿ ಈಗಾಗಲೇ ಸ್ವಚ್ಛಗೊಳಿಸಿ ಅಭಿವೃದ್ಧಿಪಡಿಸಿರುವ ಸ್ಥಳಗಳಲ್ಲಿ ಮತ್ತೆ ಕಸ ಹಾಕಿದರೆ ದಂಡದ ಜೊತೆಗೆ ಪೊಲೀಸ್ ಪ್ರಕರಣವೂ ದಾಖಲಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇಂತಹ ಪ್ರದೇಶಗಳಲ್ಲಿ ಮಾರ್ಷಲ್ಗಳ ಗಸ್ತು ಹೆಚ್ಚಿಸಲಾಗಿದ್ದು, ಸಾರ್ವಜನಿಕರು ನಗರ ಸ್ವಚ್ಛತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರುವನ್ನು ಸ್ವಚ್ಛ, ಸುಂದರ ಮತ್ತು ಆರೋಗ್ಯಕರ ನಗರವನ್ನಾಗಿಸುವ ಗುರಿಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಜವಾಬ್ದಾರಿಯುತವಾಗಿ ವರ್ತಿಸುವುದು ಅಗತ್ಯವಾಗಿದೆ.
Tags:#Bengaluru #BengaluruNews #Garbage #CleanBengaluru #BBMP #GBA #FIR #Banaswadi #KarnatakaNews #CivicSense #SwachhBharat #PoliceCase #PublicAwareness #KarunaaduTimes #BengaluruUpdates #BreakingNews #KannadaNews #ViralNews #CityNews #ಕ್ಲೀನಸಿಟಿ
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update