ಶಿವಮೊಗ್ಗ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಬಿಎಸ್ಎನ್ಎಲ್ನ ನಿವೃತ್ತ ನೌಕರ ಸುರೇಶ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಸುರೇಶ್ ಅವರು ದಾವಣಗೆರೆ ನಿವಾಸಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪುತ್ರ ಅಮೃತ್ (36) ಅವರೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಕಾರನ್ನು ಪುತ್ರ ಅಮೃತ್ ಚಾಲನೆ ಮಾಡುತ್ತಿದ್ದರು.
ಮಾಹಿತಿಯ ಪ್ರಕಾರ, ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ ಕಾರಿನ ಮೇಲಿನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಮೋರಿಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ.
ಅಪಘಾತದ ವೇಳೆ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟರೆ, ಪುತ್ರ ಅಮೃತ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.
Tags: #Shivamogga #Accident #RoadAccident #Davanagere #BSNL #CarCrash #KarnatakaNews #BreakingNews #KannadaNews #KarunaaduTimes #RoadSafety #ShivamoggaNews #LatestNews
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update