ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ಮುಂಜಾನೆ ನಡೆದ ಗುಂಡಿನ ದಾಳಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಪಿಸ್ತೂಲ್ನಿಂದ ಗುಂಡು ಹಾರಿಸಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದಿರುವ ಘಟನೆ ಕುಂದಾಪುರದ ಚರ್ಚ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಬಾರ್ಕೂರು–ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ. ಅವರು ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯ ಪ್ರಕಾರ, ಮುಂಜಾನೆ ಸುಮಾರು 3:30 ಗಂಟೆ ವೇಳೆಗೆ ಐವನ್ ರಿಚರ್ಡ್ ಅವರು ತಮ್ಮ ಪರಿಚಯದ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದರು. ಈ ವೇಳೆ ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ನಿಂದ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ದುಷ್ಕರ್ಮಿ ಪರಾರಿಯಾಗಿದ್ದು, ಪ್ರಕರಣದ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಮೃತರು ತಮ್ಮ ಮೊದಲ ಪತ್ನಿಯಿಂದ ಪ್ರತ್ಯೇಕವಾಗಿ ವಾಸವಿದ್ದು, ನಂತರ ಬಾರ್ಕೂರು ಮೂಲದ ಮಹಿಳೆಯೊಂದಿಗೆ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಆದರೆ, ಈ ಪ್ರಕರಣಕ್ಕೆ ವೈಯಕ್ತಿಕ ಸಂಬಂಧವೇ ಕಾರಣವೇ ಅಥವಾ ಬೇರೆ ಹಿನ್ನೆಲೆಯಿದೆಯೇ ಎಂಬುದರ ಕುರಿತು ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಆರೋಪಿಯ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿದಿದೆ.
Tags: #Kundapura #Udupi #KarnatakaCrime #BreakingNews #GunAttack #MurderCase #HolyRosaryChurch #CrimeNews #PoliceInvestigation #UdupiNews #KundapuraNews #KarunaaduTimes #Karnataka #Breaking
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update