ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ರೂಪ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಹೊಸ ಸಚಿವರ ಪಟ್ಟಿಗೆ ಒಪ್ಪಿಗೆ ನೀಡಿದ್ದು, ಒಟ್ಟು 20 ಮಂದಿ ಶಾಸಕರಿಗೆ ಸಚಿವ ಸ್ಥಾನ ದೊರೆತಿದೆ.
ನವದೆಹಲಿದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಿರಿಯ ನಾಯಕರು ಅಂತಿಮ ಚರ್ಚೆ ನಡೆಸಿ ಪಟ್ಟಿಯನ್ನು ಅನುಮೋದಿಸಿದ್ದಾರೆ.
ಇದೇ ವೇಳೆ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಸ್ಥಾನಕ್ಕೆ ಆರ್.ವಿ. ದೇಶಪಾಂಡೆ ಹಾಗೂ ದಿನೇಶ್ ಗುಂಡೂರಾವ್ ಅವರ ಹೆಸರುಗಳೂ ಕೇಳಿಬಂದಿದ್ದರೂ, ಅಂತಿಮವಾಗಿ ಹೈಕಮಾಂಡ್ ಟಿ.ಬಿ. ಜಯಚಂದ್ರ ಅವರಿಗೆ ಅವಕಾಶ ನೀಡಿದೆ.
ಹೊಸ ಸಚಿವರ ಪ್ರಮಾಣವಚನ ಸಮಾರಂಭವು ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿದ್ದು, ರಾಜ್ಯಪಾಲರ ಸಮ್ಮುಖದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಚಿವ ಸ್ಥಾನ ಪಡೆದಿರುವ ಶಾಸಕರು:
- ಪಿಎಂ ನರೇಂದ್ರಸ್ವಾಮಿ
- ಶಿವರಾಜ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ.ಎಸ್. ಬಸವಂತಪ್ಪ
- ಬಿ. ನಾಗೇಂದ್ರ
- ಟಿ. ರಘುಮೂರ್ತಿ
- ಜಮೀರ್ ಅಹಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಪುಟ್ಟರಂಗಶೆಟ್ಟಿ
- ಮಂಕಾಳ ವೈದ್ಯ
- ಅಜಯ್ ಸಿಂಗ್
- ಚಲುವರಾಯಸ್ವಾಮಿ
- ಶಿವಲಿಂಗೇಗೌಡ
- ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ್
- ಲಕ್ಷ್ಮಣ ಸವದಿ
ಸಂಪುಟ ವಿಸ್ತರಣೆಯೊಂದಿಗೆ ಸಚಿವ ಸ್ಥಾನ ವಂಚಿತರಾದ ಶಾಸಕರ ಮುಂದಿನ ರಾಜಕೀಯ ನಡೆ ಹಾಗೂ ಖಾತೆ ಹಂಚಿಕೆ ಈಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಲಿದೆ.