ಹಾಸನ, ಆ. 3: ಪೊಲೀಸ್ ಕಾನ್ಸ್ಟೇಬಲ್ ಆಗಿ ದೇಶಸೇವೆ ಮಾಡುವ ಕನಸು ಹೊತ್ತು ಪರೀಕ್ಷೆ ಬರೆದು ಮನೆಗೆ ಹಿಂದಿರುಗುತ್ತಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾಗನೂರು ಗ್ರಾಮದ ಸಮೀಪ ನಡೆದಿದೆ.
ಮೃತರನ್ನು 20 ವರ್ಷದ ಸಾಗರ್ಗೌಡ ಎಂದು ಗುರುತಿಸಲಾಗಿದೆ. ಹಾಸನದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಅವರು ಪೊಲೀಸ್ ಇಲಾಖೆಗೆ ಸೇರುವ ಗುರಿಯೊಂದಿಗೆ ಇತ್ತೀಚೆಗೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆ ಮುಗಿಸಿ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ಶೆಟ್ಟಿಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಸಾಗರ್ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕನ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಮಗ ಪೊಲೀಸ್ ಅಧಿಕಾರಿಯಾಗಿ ಕುಟುಂಬದ ಹೆಮ್ಮೆ ಆಗಬೇಕು ಎಂಬ ಕನಸು ಕಂಡಿದ್ದ ಪೋಷಕರಿಗೆ ಈ ದುರಂತ ಭಾರೀ ಆಘಾತ ತಂದಿದೆ. ಮಗನ ಅಕಾಲಿಕ ಸಾವಿನಿಂದ ಕುಟುಂಬದವರ ಆಕ್ರಂದನ ಕಂಡು ಸ್ಥಳೀಯರ ಕಣ್ಣಲ್ಲೂ ನೀರು ತರಿಸಿದೆ.
ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಪ್ರಕರಣದ ತನಿಖೆಗೆ ಮಹತ್ವದ ಸಾಕ್ಷಿಯಾಗಿ ಪರಿಣಮಿಸಿದೆ. ಮಾಹಿತಿ ತಿಳಿದ ಕೂಡಲೇ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
Tags:#Hassan #Alur #RoadAccident #PoliceConstableExam #SagarGowda #KarnatakaNews #BreakingNews #AccidentNews #HassanNews #Karnataka #PoliceRecruitment #CCTV #KarunaaduTimes #KannadaNews #TrendingNews
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update