ಹಾಸನ: ಮೊಬೈಲ್ ಕೊಡಿಸುವಂತೆ ಪೋಷಕರನ್ನು ಒತ್ತಾಯಿಸಿದ್ದ 13 ವರ್ಷದ ಬಾಲಕನೊಬ್ಬ, ತಂದೆ ಮೊಬೈಲ್ ಕೊಡಿಸಲು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ನಡೆದಿದೆ. 😔
ಮೃತ ಬಾಲಕನನ್ನು ಪ್ರೀತಂ (13) ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಮೂಲದ ಶ್ರೀನಿವಾಸ್ ಮತ್ತು ಗೌರಮ್ಮ ದಂಪತಿಯ ಪುತ್ರನಾಗಿದ್ದ ಪ್ರೀತಂ, ತನ್ನ ಪೋಷಕರೊಂದಿಗೆ ಯಡಿಯೂರಿಗೆ ಬಂದಿದ್ದ ಎನ್ನಲಾಗಿದೆ. ದಂಪತಿ ಸ್ಥಳೀಯ ಖಾಸಗಿ ಲೇಔಟ್ನ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ತಾತ್ಕಾಲಿಕ ವಸತಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.
ಪ್ರೀತಂ ಚಿತ್ರದುರ್ಗದಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೊಬೈಲ್ ಕೊಡಿಸುವಂತೆ ಬಾಲಕ ಪೋಷಕರನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದ್ದು, ತಂದೆ ಮೊಬೈಲ್ ಕೊಡಿಸಲು ನಿರಾಕರಿಸಿದ್ದರಿಂದ ಬಾಲಕ ಮನನೊಂದಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ತಾತ್ಕಾಲಿಕ ವಸತಿ ಪ್ರದೇಶದಲ್ಲಿ ಬಾಲಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
Tags:#HassanNews #ಹಾಸನಸುದ್ದಿ #Yediyur #ಕರ್ನಾಟಕಸುದ್ದಿ #KarnatakaNews #Hassan #ChildSafety #ಮಕ್ಕಳಸುರಕ್ಷತೆ #KarunaaduTimes
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update