ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ವೋಲ್ವೋ ಬಸ್ ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. 😔
ಅಗಲಗುರ್ಕಿ ಸಮೀಪ ಈ ಅಪಘಾತ ಸಂಭವಿಸಿದ್ದು, ಹೈದರಾಬಾದ್ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ ಮುಂಭಾಗದಲ್ಲಿ ತೆರಳುತ್ತಿದ್ದ ಕಂಟೇನರ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ತೀವ್ರವಾಗಿ ಹಾನಿಗೊಳಗಾಗಿದ್ದು, ಚಾಲಕನ ಸಮೀಪದ ಮುಂಭಾಗದಲ್ಲಿ ಕುಳಿತಿದ್ದ ಸುಮಾರು 28 ವರ್ಷದ ಕೌಸರ್ ತಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ಮೂಲದವರು ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಬಸ್ನ ಮುಂಭಾಗದ ಅವಶೇಷಗಳ ನಡುವೆ ಮೃತದೇಹ ಸಿಲುಕಿಕೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ನೆರವಿನಿಂದ ಬಸ್ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದರು. ಬಳಿಕ ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು.
ಮೃತ ಯುವತಿ ಕೊಡಿಕೊಂಡ ಚೆಕ್ಪೋಸ್ಟ್ ಬಳಿ ಬಸ್ ಹತ್ತಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬಸ್ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರೂ, ಉಳಿದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. 🙏
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
🌐 ಇನ್ನಷ್ಟು ಕರ್ನಾಟಕದ ಕ್ಷಣಕ್ಷಣದ ಸುದ್ದಿಗಳಿಗಾಗಿ:
👉 www.karunaadutimes.com
Tags:#Chikkaballapur #ಚಿಕ್ಕಬಳ್ಳಾಪುರ #RoadAccident #NH44 #VolvoBus #ಕರ್ನಾಟಕಸುದ್ದಿ #KarnatakaNews #AccidentNews #BreakingNews #KarunaaduTimes
📲 Fast • Trusted • Kannada News 24×7
⭐ Karunaadu ಟೈಮ್ಸ್