ಬೆಂಗಳೂರು ಕಡೆಯಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್ಗಳನ್ನು ಸಾಗಿಸುತ್ತಿದ್ದ ಲಾರಿಗೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಬೊಲೆರೋ ಗೂಡ್ಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 💥
ಮೃತರ ಪೈಕಿ ಷಣ್ಮುಗ (50) ಎಂಬುವವರ ಗುರುತು ಪತ್ತೆಯಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಬೊಲೆರೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋರಾ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:#Tumakuru #Tumkur #TumakuruNews #TumkurNews #TumakuruAccident #TumkurAccident #RoadAccident #KarnatakaNews #KarnatakaAccident #Sorekunte #KoraPolice #BoleroAccident #LorryAccident #HighwayAccident #AccidentNews #BreakingNews #LatestNews #ಕರ್ನಾಟಕಸುದ್ದಿ #ತುಮಕೂರು #ತುಮಕೂರುಸುದ್ದಿ #ಅಪಘಾತ #ರಸ್ತೆಅಪಘಾತ #ಹೈವೇಅಪಘಾತ #ಬೊಲೆರೋಅಪಘಾತ #ಕರ್ನಾಟಕನ್ಯೂಸ್ #KarunaaDuTimes #KarunaaDuTimesNews